Skip to main content
ವಿಡಿಯೋ
1/2
local

ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆಗೆ ಬಿಗ್ ರಿಲೀಫ್: 80 ರೂಪಾಯಿ ಕಡಿತ..!

By Sushmitha R
ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆಗೆ ಬಿಗ್ ರಿಲೀಫ್: 80 ರೂಪಾಯಿ ಕಡಿತ..!

ಇಂಧನ ಬೆಲೆಯಲ್ಲಿ ತೀವ್ರ ಏರಿಕೆಗೆ ದೇಶದಾದ್ಯಂತ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರವು ಪೆಟ್ರೋಲ್ ಬೆಲೆಯಲ್ಲಿ 80 ಪಾಕಿಸ್ತಾನಿ ರೂಪಾಯಿ ಕಡಿತ ಮಾಡಿದೆ.

ಇಂಧನ ಬೆಲೆಯಲ್ಲಿ ತೀವ್ರ ಏರಿಕೆಗೆ ದೇಶದಾದ್ಯಂತ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರವು ಪೆಟ್ರೋಲ್ ಬೆಲೆಯಲ್ಲಿ 80 ಪಾಕಿಸ್ತಾನಿ ರೂಪಾಯಿ ಕಡಿತ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರಧಾನಿ ಶೆಹಬಾಜ್ ಷರೀಫ್, ಪೆಟ್ರೋಲ್ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್‌ಗೆ 80 ಪಾಕಿಸ್ತಾನಿ ರೂಪಾಯಿ ಕಡಿತಗೊಳಿಸಲು ಸರ್ಕಾರ ನಿರ್ಧರಿಸಿದೆ.

ಇದರಿಂದಾಗಿ ಗ್ರಾಹಕರಿಗೆ ಪ್ರತಿ ಲೀಟರ್ ಪೆಟ್ರೋಲ್ 378 ಪಾಕಿಸ್ತಾನಿ ರೂಪಾಯಿಗಳಿಗೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಪರಿಷ್ಕೃತ ದರವು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದ್ದು, ದೇಶದಾದ್ಯಂತ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈ ದರ ಅನ್ವಯವಾಗಲಿದೆ ಎಂದು ಹೇಳಿದ್ದಾರೆ. ಈ ಕಡಿತವು ಕನಿಷ್ಠ ಒಂದು ತಿಂಗಳ ಕಾಲ ಮುಂದುವರಿಯಲಿದೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.

ಜನರ ಜೀವನ ಸುಗಮವಾಗುವವರೆಗೆ ತಾವು ವಿಶ್ರಾಂತಿ ಪಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ. ಗುರುವಾರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಗಣನೀಯವಾಗಿ ಹೆಚ್ಚಿಸಿತ್ತು. ಪೆಟ್ರೋಲ್ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್‌ಗೆ 105 ಪಾಕಿಸ್ತಾನಿ ರೂಪಾಯಿಂದ 160ಕ್ಕೆ ಏರಿಸಿದ್ದರಿಂದ ಪೆಟ್ರೋಲ್ ಬೆಲೆಯು 321 ರಿಂದ 458 ಪಾಕಿಸ್ತಾನಿ ರೂಪಾಯಿಗೆ ಏರಿಕೆಯಾಗಿತ್ತು. ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 184.49ಪಾಕಿಸ್ತಾನಿ ರೂಪಾಯಿ ಹೆಚ್ಚಿಸಿತ್ತು. plain Shining Glass bangles Set For Women And Girls pack of 24 (Size 2.4,2.6,2.8,2.10,And 2.12 Avaiables)

ಆದರೆ ಅದರ ಮೇಲಿನ ತೆರಿಗೆಯನ್ನು ರದ್ದುಗೊಳಿಸಿತ್ತು. ಈ ಏರಿಕೆಯಿಂದ ಡೀಸೆಲ್ ಬೆಲೆ ಸುಮಾರು 520 ರೂಪಾಯಿಗೆ ತಲುಪಿತ್ತು. ಕೊಲ್ಲಿ ರಾಷ್ಟ್ರಗಳಲ್ಲಿನ ಪರಿಸ್ಥಿತಿ, ವಿಶೇಷವಾಗಿ ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನತೆ ಮತ್ತು ಹಾರ್ಮುಜ್ ಜಲಸಂಧಿಯ ಪರಿಣಾಮದಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿದೆ ಎಂದು ಸರ್ಕಾರ ತಿಳಿಸಿತ್ತು.

ಈ ಏರಿಕೆಯು ಪಾಕಿಸ್ತಾನದ ಆರ್ಥಿಕತೆಯ ಮೇಲೆ ಭಾರಿ ಪರಿಣಾಮ ಬೀರಿದ್ದು, ಸಾರಿಗೆ, ಆಹಾರ ಮತ್ತು ವಿದ್ಯುತ್ ದರಗಳು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಾರೆ. ಈ ತೀವ್ರ ಏರಿಕೆಗೆ ದೇಶಾದ್ಯಂತ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬೀದಿಗಳಲ್ಲಿ ಪ್ರತಿಭಟನೆಗಳು ನಡೆದವು. ಇದರ ಪರಿಣಾಮವಾಗಿ ಸರ್ಕಾರ ತ್ವರಿತವಾಗಿ ಪ್ರತಿಕ್ರಿಯಿಸಿ ಪೆಟ್ರೋಲ್ ಬೆಲೆ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ."ರಷ್ಯಾ-ಉಕ್ರೇನ್ ಯುದ್ಧಕ್ಕೆ ಹೊಸ ತಿರುವು: ರಷ್ಯಾದ ರಾಸಾಯನಿಕ ಕಾರ್ಖಾನೆಗಳ ಮೇಲೆ ಉಕ್ರೇನ್ ತಿರುಗೇಟು; ನಾಗರಿಕರನ್ನು ಗುರಿಯಾಗಿಸಿಕೊಂಡ ರಷ್ಯಾದ ಹೊಸ ಯುದ್ಧ ತಂತ್ರ."

ಈ ಕಡಿತದಿಂದ ಸಾಮಾನ್ಯ ಜನರ ಮೇಲಿನ ಆರ್ಥಿಕ ಒತ್ತಡ ಕಡಿಮೆಯಾಗುವ ನಿರೀಕ್ಷೆ ಇದೆ. ಆದರೆ ಡೀಸೆಲ್ ಬೆಲೆಯಲ್ಲಿ ಇನ್ನೂ ಬದಲಾವಣೆಯಾಗಿಲ್ಲ. ಪಾಕಿಸ್ತಾನದಲ್ಲಿ ಇಂಧನ ಬೆಲೆ ಏರಿಕೆ ಮತ್ತು ಕಡಿತಗಳು ಆಗಾಗ್ಗೆ ನಡೆಯುತ್ತವೆ.

ಆದರೆ ಈ ಬಾರಿಯ ಏರಿಕೆ ದಾಖಲೆಯಾಗಿದೆ. ಜನರ ಜೀವನ ವೆಚ್ಚ ಹೆಚ್ಚಾಗುತ್ತಿದ್ದು, ಸರ್ಕಾರ ಇದನ್ನು ನಿಯಂತ್ರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ನಡುವೆ ಇಸ್ಲಾಮಾಬಾದ್‌ನಲ್ಲಿ ಒಂದು ತಿಂಗಳ ಕಾಲ ಉಚಿತ ಸಾರಿಗೆ ಸೌಲಭ್ಯವನ್ನು ಘೋಷಿಸಲಾಗಿದೆ. ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ ಅಬ್ಬರ: ಬಿಜೆಪಿಯ 'ಸಾಲ'ದ ಆರೋಪಕ್ಕೆ ಅಂಕಿ-ಅಂಶಗಳ ಸಮೇತ ಸಿಎಂ ಖಡಕ್ ತಿರುಗೇಟು!