Skip to main content
ವಿಡಿಯೋ
politics

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ: ನಾಳೆ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

By Bhavana Gowda
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ: ನಾಳೆ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಇವರು ನಿತೀಶ್ ಕುಮಾರ್ ಅವರ ಮಾಜಿ ಆಪ್ತ ಶಕುನಿ ಚೌಧರಿ ಅವರ ಪುತ್ರ. 2017ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಚೌಧರಿ ಅವರು, ಅಲ್ಪಾವಧಿಯಲ್ಲೇ ಪಕ್ಷದಲ್ಲಿ ಪ್ರಭಾವಿ ನಾಯಕನಾಗಿ ಬೆಳೆದಿದ್ದಾರೆ. ಪ್ರಸ್ತುತ ಅವರು ತಾರಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಪಟನಾ: ಬಿಹಾರ ರಾಜಕೀಯದಲ್ಲಿ ಇಂದು ಮಹತ್ತರ ಬದಲಾವಣೆಯಾಗಿದ್ದು, ಹತ್ತು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಬಿಜೆಪಿಯ ಹಿರಿಯ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ. ಈ ಮೂಲಕ ಬಿಹಾರದಲ್ಲಿ ಬಿಜೆಪಿ ನಾಯಕರೊಬ್ಬರು ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.

ಯಾರು ಈ ಸಾಮ್ರಾಟ್ ಚೌಧರಿ?

ಹಿನ್ನೆಲೆ: ಹಾಲಿ ಉಪ ಮುಖ್ಯಮಂತ್ರಿಯಾಗಿರುವ ಸಾಮ್ರಾಟ್ ಚೌಧರಿ ಅವರು ಹಿಂದುಳಿದ ವರ್ಗದ (OBC) ಪ್ರಭಾವಿ ಕೊಯೇರಿ ಅಥವಾ ಕುಶ್ವಾಹ ಸಮುದಾಯಕ್ಕೆ ಸೇರಿದವರು. ಬಿಹಾರದ ಹಿಂದುಳಿದ ಜಾತಿಗಳ ಪೈಕಿ ಯಾದವರ ನಂತರ ಕುಶ್ವಾಹ ಸಮುದಾಯವು ಎರಡನೇ ಅತಿದೊಡ್ಡ ಮತಬ್ಯಾಂಕ್ ಹೊಂದಿದೆ.

ರಾಜಕೀಯ ಪಯಣ: ಇವರು ನಿತೀಶ್ ಕುಮಾರ್ ಅವರ ಮಾಜಿ ಆಪ್ತ ಶಕುನಿ ಚೌಧರಿ ಅವರ ಪುತ್ರ. 2017ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಚೌಧರಿ ಅವರು, ಅಲ್ಪಾವಧಿಯಲ್ಲೇ ಪಕ್ಷದಲ್ಲಿ ಪ್ರಭಾವಿ ನಾಯಕನಾಗಿ ಬೆಳೆದಿದ್ದಾರೆ. ಪ್ರಸ್ತುತ ಅವರು ತಾರಾಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ನಾಳೆ ಪ್ರಮಾಣ ವಚನ ಸ್ವೀಕಾರ?

ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರು ನಾಳೆ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.