ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಸಂಕನಗೌಡ ಅವರ ನಾಪತ್ತೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ವೇಳೆ ಮಲ್ಲಿಕಾರ್ಜುನ ಹೆಸರು ಕೂಡ ಸಾಕಷ್ಟು ಚರ್ಚೆಗೆ ಬಂದಿತ್ತು. ಅವರು ಕಾಣೆಯಾಗಿರುವ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಆದರೆ ಈಗ ಮಲ್ಲಿಕಾರ್ಜುನ ಸ್ವತಃ ಮುಂದೆ ಬಂದು ತಮ್ಮ ನಾಪತ್ತೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಿದ್ದಾರೆ.Arayna Women's Cotton Printed Floral Straight Kurta with Palazzo Pants and Dupatta
ಮಲ್ಲಿಕಾರ್ಜುನ ಅವರು ಮೂಲತಃ ಗದಗ ಜಿಲ್ಲೆಯವರು. ಅವರು ಸುಮಾರು 18 ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕ, ಸಹ ನಿರ್ದೇಶಕ, ನಿರ್ಮಾಪಕ ಮತ್ತು ವಿತರಕರಾಗಿ ಕೆಲಸ ಮಾಡಿದ್ದಾರೆ. ಯಶ್ ಅಭಿನಯದ ‘ಮೊದಲ ಸಲ’ ಚಿತ್ರದ ನಿರ್ಮಾಣದಲ್ಲೂ ಅವರು ಭಾಗಿಯಾಗಿದ್ದರು. ನಂತರ ಅವರು ದರ್ಶನ್ ಅವರ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸಿದ್ದರು. ಜೊತೆಗೆ ಹೋಟೆಲ್ ಉದ್ಯಮದಲ್ಲೂ ತೊಡಗಿಸಿಕೊಂಡಿದ್ದರು.
ಕೆಲವು ವರ್ಷಗಳ ಹಿಂದೆ ವೈಯಕ್ತಿಕ ಸಮಸ್ಯೆಗಳು ಮತ್ತು ವ್ಯವಹಾರದಲ್ಲಿ ಉಂಟಾದ ನಷ್ಟದ ಕಾರಣದಿಂದ ಅವರು ಬೆಂಗಳೂರನ್ನು ತಾತ್ಕಾಲಿಕವಾಗಿ ಬಿಟ್ಟು ಹೋಗಬೇಕಾಯಿತು ಎಂದು ಹೇಳಿದ್ದಾರೆ. ಈ ಕಾರಣದಿಂದಲೇ ಅವರು ಸಾರ್ವಜನಿಕ ಜೀವನದಿಂದ ದೂರ ಉಳಿದಿದ್ದರು. ಇದರಿಂದಲೇ ಅವರ ಬಗ್ಗೆ ಹಲವು ಊಹಾಪೋಹಗಳು ಹುಟ್ಟಿಕೊಂಡಿದ್ದವು.ಇದನ್ನು ಓದಿ:‘ಟಾಕ್ಸಿಕ್’ ಸಾಮಾನ್ಯ ಗ್ಯಾಂಗ್‌ಸ್ಟರ್ ಸಿನಿಮಾ ಅಲ್ಲ..ಯಶ್ ಹೇಳಿದ ಮಾತು ಕೇಳಿದ್ರೆ ಶಾಕ್ ಆಗ್ತೀರಾ..!
ಇದೀಗ ಅವರು ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಇಂದು ಪತ್ರಿಕಾಗೋಷ್ಠಿ ಕರೆದಿದ್ದಾರೆ. ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ದರ್ಶನ್ ಕುರಿತಾಗಿ ಕೂಡ ಅವರು ಮಾತನಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿ ಹೊರಬರುವ ನಿರೀಕ್ಷೆಯಿದೆ.