Skip to main content
ವಿಡಿಯೋ
crime

ಟೆಕ್ಕಿ ಯುವತಿ ಸ್ನಾನ ಮಾಡುವ ವೇಳೆ ವಿಡಿಯೋ ರೆಕಾರ್ಡ್: ಆರೋಪಿ ಬಂಧನ

By Bhavana Gowda
ಟೆಕ್ಕಿ ಯುವತಿ ಸ್ನಾನ ಮಾಡುವ ವೇಳೆ ವಿಡಿಯೋ ರೆಕಾರ್ಡ್: ಆರೋಪಿ ಬಂಧನ

ಇನ್ನೂ ವಿಶೇಷವೆಂದರೆ, ದೂರು ನೀಡಿದ ಯುವತಿಯ ಮನೆಯ ಪಕ್ಕದಲ್ಲೇ ಬಾಡಿಗೆ ಮನೆಯಲ್ಲಿ ಆರೋಪಿ ವಾಸವಿದ್ದ ಎನ್ನಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಮಹದೇವಪುರ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರು: ಟೆಕ್ಕಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಯತ್ನಿಸಿದ್ದ ಆರೋಪಿಯನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಘಟನೆ ಕಳೆದ ಏಪ್ರಿಲ್ 30ರಂದು ಗರುಡಾಚಾರ್ ಪಾಳ್ಯದ ಆಶ್ರಯ ಲೇಔಟ್‌ನಲ್ಲಿ ನಡೆದಿದೆ.

ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಯುವತಿ, ಕೆಲಸ ಮುಗಿಸಿ ರಾತ್ರಿ ಸುಮಾರು 9:30ರ ವೇಳೆಗೆ ಮನೆಗೆ ಬಂದಿದ್ದರು. ಬಳಿಕ ತಮ್ಮ ಮನೆಯಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ, ಬಾತ್‌ರೂಮ್ ಕಿಟಕಿಯ ಬಳಿ ಯಾರೋ ಮೊಬೈಲ್ ಹಿಡಿದು ವಿಡಿಯೋ ರೆಕಾರ್ಡ್ ಮಾಡುತ್ತಿರುವುದನ್ನು ಗಮನಿಸಿದ್ದಾರೆ.

ತಕ್ಷಣ ಯುವತಿ ಕಿರುಚಿಕೊಂಡಿದ್ದು, ಇದನ್ನು ಕಂಡ ಆರೋಪಿ ಮೊಬೈಲ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಯುವತಿ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು, ಕಾರ್ತಿಕ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಮೂಲತಃ ಕೇರಳದವನಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎನ್ನಲಾಗಿದೆ.

ಇನ್ನೂ ವಿಶೇಷವೆಂದರೆ, ದೂರು ನೀಡಿದ ಯುವತಿಯ ಮನೆಯ ಪಕ್ಕದಲ್ಲೇ ಬಾಡಿಗೆ ಮನೆಯಲ್ಲಿ ಆರೋಪಿ ವಾಸವಿದ್ದ ಎನ್ನಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಮಹದೇವಪುರ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.